Wednesday, June 7, 2023

Latest Posts

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಚುನಾವಣೆ ಹೊತ್ತಿನಲ್ಲೇ ಡಿಕೆ ಶಿವಕುಮಾರ್​ ಅರ್ಜಿ ವಜಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಇದೀಗ ಇದು ತಿರಸ್ಕೃತಗೊಂಡಿದ್ದು, ಚುನಾವಣೆ ಸಂದರ್ಭದಲ್ಲೇ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.
ಡಿಕೆ ಶಿವಕುಮಾರ್ ಅರ್ಜಿ ಕುರಿತ ವಿಚಾರಣೆಯನ್ನು ಏಪ್ರಿಲ್ 17ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಸದ್ಯಕ್ಕಿಲ್ಲ ಡಿಕೆಶಿಗೆ ಬಂಧನ ಭೀತಿ

ಅರ್ಜಿ ವಜಾಗೊಂಡರೂ ಡಿಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲ. ಸಿಬಿಐ ತನಿಖೆ ಪ್ರಶ್ನಿಸಿ ಮತ್ತೊಂದು ಅರ್ಜಿಯನ್ನು ಅವರು ಹೈಕೋರ್ಟ್​​ಗೆ ಸಲ್ಲಿಸಿದ್ದು, ಅದರ ವಿಚಾರಣೆಯನ್ನು ಮೇ ಅಂತ್ಯದವರೆಗೆ ಮುಂದೂಡಲಾಗಿದೆ. ಜತೆಗೆ, ಅಲ್ಲಿಯವರೆಗೆ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಬುಧವಾರ ಹೇಳಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!