ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿ ಗಳಿಕೆ ಸಂಬಂಧ ಸಚಿವ ಜಮೀರ್ ಅಹ್ಮದ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ.
ಡಿ.3ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್ಪಿ ಸೂಚಿಸಿದ್ದಾರೆ ಎನ್ನಲಾಗಿದೆ.
ಇಡಿ ದಾಳಿ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಇಡಿ ಆದೇಶಿಸಿತ್ತು. ಲೋಕಾಯುಕ್ತ ಎರಡು ವರ್ಷಗಳಿಂದ ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.