ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು. ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.
ನಂತರ ಎಸಿಬಿ ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಪ್ರಕರಣವನ್ನು ಇದೀಗ ಲೋಕಾಯುಕ್ತ ತನಿಖೆ ನಡೆಸುತ್ತಿದೆ . ಈ ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಹಾಗಾಗಿ ಸಚಿವ ಜಮೀರ್ ಅಹ್ಮದ್ ಇದೀಗ ವಿಚಾರಣೆಗೆ ಹಾಜರಾಗಿದ್ದಾರೆ.