ಅಕ್ರಮ ಆಸ್ತಿ ಗಳಿಕೆ ಕೇಸ್:​ ಡಿಕೆಶಿ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!