ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾನೂನು ಸಂಕಷ್ಟದಿಂದ ಸದ್ಯಕ್ಕೆ ನಿರಾಳರಾಗಿದ್ದಾರೆ.
ಹೈಕೋರ್ಟ್ನಲ್ಲಿ ಇಂದು ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಏಕಸದಸ್ಯ ಪೀಠವು ಡಿ.ಕೆ.ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿತ್ತು.
ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಹೈಕೋರ್ಟ್ ನ ವಿಭಾಗೀಯ ಪೀಠವು, ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.