ಗಾಂಜಾ ಅಕ್ರಮ ಮಾರಾಟ: ಮಾಲು ಸಹಿತ ಆರೋಪಿ ಸೆರೆ

ಹೊಸದಿಗಂತ ವರದಿ ಕುಶಾಲನಗರ: 

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಬಸವನಹಳ್ಳಿ ಗ್ರಾಮದ ವೃತ್ತದ ಸಮೀಪದಲ್ಲಿ ಹೆರೂರು ಗ್ರಾಮದ ವಿನಯ್ ಎಂಬಾತ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು 4,500 ರೂ ಬೆಲೆಬಾಳುವ ಗಾಂಜಾ ಹಾಗೂ ಗಾಂಜಾ ಮಾರಾಟ ಮಾಡಿದ್ದೆನ್ನಲಾದ 1200 ರೂ.‌ನಗದು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಪ್ರಿಯಕುಮಾರ್, ಸಫೀನ್, ದಿನೇಶ್, ನಾಗರಾಜ್, ಪ್ರಕಾಶ್, ಯೋಗೇಶ್ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!