Thursday, March 30, 2023

Latest Posts

ಗಾಂಜಾ ಅಕ್ರಮ ಮಾರಾಟ: ಆರೋಪಿ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪಿರಿಯಾಪಟ್ಟಣ ತಾಲೂಕಿನ ಸುಂಕದಳ್ಳಿ ನಿವಾಸಿ ಎಸ್.ಜಿ.ನಿಶಾಂತ್ (20) ಎಂದು ಗುರುತಿಸಲಾಗಿದ್ದು, ಆತನಿಂದ 170 ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಕುಶಾಲನಗರ ಗೌಡ ಸಮಾಜದ ಬಳಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಶಾಲನಗರ ನಗರ ಠಾಣೆಯ ಇನ್ಸ್ಪೆಕ್ಟರ್ ಶ್ರೀಕಾಂತ್, ಪಿಎಸ್ಐ ಲೋಹಿತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು, ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್
ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!