February 22, 2026
Sunday, February 22, 2026
spot_img

ಅಕ್ರಮ ಗಾಂಜಾ ಮಾರಾಟ: ಮಾಲು ಸಹಿತ ಇಬ್ಬರ ಬಂಧನ

ಹೊಸದಿಗಂತ ವರದಿ ಮಡಿಕೇರಿ:

ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ವೀರಾಜಪೇಟೆ ಸುಣ್ಣದ ಬೀದಿಯ ಹಸೈನಾರ್ (43), ಬಾಳುಗೋಡು ಗ್ರಾಮದ ಎ.ಜಿ.ಮೋಹನ (42) ಬಂಧಿತ ಆರೋಪಿಗಳಾಗಿದ್ದು, ಅವರಿಂದ 1ಕೆಜಿ 60ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:

ವೀರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಮ್ಮತ್ತಿ ಗ್ರಾಮದ ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸೇವನೆ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ‌ ವೀರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಗ್ರಾಮಾಂತರ ಠಾಣೆ ಪಿಎಸ್ಐಗಳಾದ ಲತಾ ಎನ್.ಜೆ, ವಾಣಿಶ್ರೀ ಬಿ.ಎಸ್, ನಗರ ಠಾಣೆ ಪಿಎಸ್ಐ ಪ್ರಮೋದ್, ಗ್ರಾಮಾಂತರ ಠಾಣೆ ಎಎಸ್ಐ ಸೋಮಣ್ಣ ಕೆ.ಬಿ, ಸಿಬ್ಬಂದಿಗಳಾದ ನವೀನ್ ಕುಮಾರ್ ಎಸ್.ಎಲ್, ಬಸವರಾಜು ಎಂ, ಅಬ್ದುಲ್ ಮಜೀದ್, ಹನೀಫ್, ಬೋಪಣ್ಣ, ರಾಧಾ, ಮಹೇಶ್ ಎಸ್, ಶಿವಪ್ರಸಾದ್, ರಾಜೇಶ್.ಎಸ್, ರಾಘವೇಂದ್ರ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !