ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರು ಲಾರಿಗಳ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಜಿಲ್ಲೆಯ ಸಾತ್ ಮೈಲ್ ಕ್ರಾಸ್ ಬಳಿ ನಡೆದಿದೆ.
ರಾಯಚೂರು ಎಸ್.ಪಿ. ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಿ ಮರಳು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಯಚೂರಿನಿಂದ ಬೀದರ್ ಕಡೆಗೆ ತೆರಳುತ್ತಿದ್ದ ಲಾರಿಗಳನ್ನು ತಡೆದು ಅಕ್ರಮವಾಗಿ ಓವರ್ ಲೋಡ್ ಹಾಗೂ ಮರಳು ಸಾಗಿಸುತ್ತಿದ್ದ 6 ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.