ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ಬಳಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗಿದ್ದ 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸೋಮವಾರ ಮಧ್ಯರಾತ್ರಿ ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಂಟೈನರ್ ಚಾಲಕ ಕಾಡಿಗೆ ಪರಾರಿಯಾಗಿದ್ದಾನೆ. ಅನುಮಾನಾಸ್ಪದ ತಪಾಸಣೆಯ ಸಮಯದಲ್ಲಿ, ಕಂಟೇನರ್ ಒಳಗೆ ಮದ್ಯದ ಬಾಟಲಿಗಳನ್ನು ಸಾಗಿಸುವ ಮತ್ತೊಂದು ವಿಭಾಗವಿದೆ ಎಂದು ತಿಳಿದುಬಂದಿದೆ.
3,060 ಮೌಲ್ಯದ ಮದ್ಯದ ಬಾಟಲಿ ಹಾಗೂ 35 ಲಕ್ಷ ಮೌಲ್ಯದ ವಾಹನ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೇಳೆ ಹಂಚಲು ಮದ್ಯ ಸಾಗಾಟ ನಡೆದಿರುವ ಬಗ್ಗೆ ತನಿಖೆ ನಡೆಸಲಾಗಿದೆ.