Tuesday, June 6, 2023

Latest Posts

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ

ಹೊಸದಿಗಂತ ವರದಿ,ಕಲಬುರಗಿ:

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಸಬ್ ಅರ್ಬನ್ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಅಕ್ರಮವಾಗಿ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಲಬುರ್ಗಿ ನಗರದ ರಫಿಕ್ ಚೌಕ್‌ನಲ್ಲಿ ದಾಳಿ ನಡೆಸಿ ವಾಹನವನ್ನು ತಡೆದು ತಪಾಸಣೆಗೈದಾಗ 7 ಟನ್‌ಗೂ ಅಧಿಕ ಪಡಿತರ ಅಕ್ಕಿ ಪತ್ತೆಯಾಗಿದೆ.
ಅಕ್ಕಿ ಹಾಗೂ ವಾಹನ ವಶಕ್ಕೆ ಪಡೆದ ಪೊಲೀಸರು, ಮಹಾರಾಷ್ಟ್ರ ಮೂಲದ ಅನಿಲ್ ರಾಠೋಡ್ ಎಂಬಾತನನ್ನು ಬಂಧಿಸಿದ್ದಾರೆ‌. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡಲಾಗುತಿತ್ತು ಎಂಬ ಅಂಶ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ಕುರಿತು ಸಬ್ ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!