ಹೊಸದಿಗಂತ ವರದಿ, ಮಂಗಳೂರು:
ತೆರಿಗೆ ವಂಚಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ ರೂ.10,62,660 ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡಿನ ಪ್ರಯಾಣಿಕ ಆರೋಪಿಯಾಗಿದ್ದು, ಈತ ದುಬೈಯಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.ಆರೋಪಿ ಅನುಮಾನ ಬಾರದಂತೆ ಜ್ಯೂಸ್ ಮಾಡುವ ಮಿಕ್ಸರ್‌ನ ಬಿಡಿಭಾಗಗಳಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ.