16 ಲಕ್ಷ ಮೌಲ್ಯದ ಶ್ರೀಗಂಧ ಅಕ್ರಮ ಸಾಗಾಟ: ಓರ್ವ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಜಿಲ್ಲೆಯ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ಘಟನೆ ನಡೆದಿದೆ.

ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ.

ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಅಕ್ರಮವಾಗಿ ಶ್ರೀಗಂಧವನ್ನು ಟ್ರಕ್ ಮೂಲಕ ಸಾಗಿಸಲಾಗುತ್ತಿತ್ತು. ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 16 ಲಕ್ಷ ಮೌಲ್ಯದ ಒಂದು ಕ್ವಿಂಟಲ್ ಶ್ರೀಗಂಧ ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಿದ್ದು, ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!