ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾದ ಅನ್‌ಕಿಟೊಲಾ ಮತ್ತು ಘಾನಾದ ಸಲಾಂ ಕ್ರಿಸ್ಟಿಯನ್ ಬಂಧಿತರು. ಈ ವಿದೇಶಿ ಪ್ರಜೆಗಳು ಮಂಗಳೂರಿನ ತಮ್ಮ ಗೆಳೆಯ ಅನಿಲ್ ಡಿಸಿಲ್ವಾ ಎಂಬವರ ಕಾರ್ಯಕ್ರಮಕ್ಕೆಂದು ಬಂದಿದ್ದರು. ಆದರೆ ಅವರ ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ಬೆಂಗಳೂರಿನಲ್ಲಿರುವ ವಿದೇಶೀಯರ ಪ್ರಾದೇಶಿಕ ನೋಂದಣಿ ಕೇಂದ್ರಕ್ಕೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.