Sunday, October 12, 2025

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ- ಪ್ರತಿವಾದ ಆಲಿಸಿದ ದ.ಕ. ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಅ.9ಕ್ಕೆ ಆದೇಶ ಕಾಯ್ದಿರಿಸಿದೆ.

ಜಿಲ್ಲಾ ಸೆಷನ್ಸ್ ಕೋರ್ಟ್‌ನಲ್ಲಿ ಶನಿವಾರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಜಾಮೀನು ನೀಡದಂತೆ ಸರ್ಕಾರಿ ವಕೀಲರು ವಾದ ಮಂಡಿಸಿ, ಆಕ್ಷೇಪಣೆ ಸಲ್ಲಿಸಿದರು.

ತಿಮರೋಡಿ ಅವರಿಗೆ ಜಾಮೀನು ನೀಡುವಂತೆ ಕೋರಿ ಅವರ ಪರ ವಕೀಲರ ವಾದವನ್ನು ಈಗಾಗಲೇ ಕೋರ್ಟ್ ಆಲಿಸಿದೆ. ಇದೀಗ ಎರಡೂ ವಾದಗಳನ್ನು ಆಲಿಸಿ, ಅಂತಿಮವಾಗಿ ಆದೇಶವನ್ನು ಕಾಯ್ದಿರಿಸಿದೆ.

error: Content is protected !!