ಮಸಾಜ್ ಪಾರ್ಲರ್ ಹೆಸರಿನಲ್ಲಿ ಇಲ್ಲೀಗಲ್‌ ಕೆಲಸ, ಟಿವಿ ನಟಿ ದಿವ್ಯಾ ವಸಂತ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ʻಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ಮಾಜಿ ನಿರೂಪಕಿ ದಿವ್ಯಾ ವಸಂತ ಇಂದಿರಾನಗರದ ಮಸಾಜ್ ಪಾರ್ಲರ್ ನಲ್ಲಿ ಶ್ರೀಮಂತ ಗ್ರಾಹಕರಿಗೆ ಗಾಳಹಾಕಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಈ ಪ್ರಕರಣ ಬಯಲಾಗುತ್ತಲೇ ಆಕೆ ತಲೆಮರೆಸಿಕೊಂಡಿದ್ದರು. ಆಕೆಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇದೀಗ ನೆರೆಯ ಕೇರಳದಲ್ಲಿ ಆಕೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ತಮಿಳುನಾಡಿಗೆ ಪರಾರಿಯಾಗಿದ್ದ ದಿವ್ಯಾ ವಸಂತ ಅಲ್ಲಿಂದ ಕೇರಳಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೀಗ ಕೇರಳದಿಂದಲೇ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್‌ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದಿರಾನಗರದ ಟ್ರೀ ಸ್ಪಾ ಮತ್ತು ಬ್ಯೂಟಿ ಮಾಲೀಕನನ್ನು ಒಳಗೊಂಡ ಹಲವರನ್ನು ಬ್ಲ್ಯಾಕ್‌ಮೇಲ್ ಮಾಡಿರುವ ಸುಲಿಗೆ ಪ್ರಕರಣದಲ್ಲಿ ದಿವ್ಯ ವಸಂತ ಆರೋಪಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!