ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋದರಮಾವನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವ ರೈತನನ್ನು ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ನಡೆದಿದೆ.
ಶರಣಪ್ಪ ಹಾವಿನಾಳ ಹಾಗೂ ಲಿಂಗಾರಜ್ ಹಾವಿನಾಳ ಅವರು 31 ವರ್ಷದ ರೈತ ಪ್ರಭುದೇವ ಅರಳಿಯನ್ನ ಹತ್ಯೆ ಮಾಡಿದ್ದಾರೆ.
ಪ್ರಭುದೇವನನ್ನಹಾವನೂರು ಜಾತ್ರೆಯಲ್ಲಿ ಕಿಡ್ನಾಪ್ ಮಾಡಿ ಹತ್ಯೆ ಮಾಡಲಾಗಿತ್ತು ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.