ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
5ಜಿ ತಂತ್ರಜ್ಞಾನಕ್ಕೆ ಸ್ವಾಗತ, ಆದರೆ ಅದು ಸುರಕ್ಷಿತವೇ ಎಂಬುದನ್ನು ತಿಳಿಯಬೇಕು ಎಂದು ನಟಿ ಜೂಹಿ ಚಾವ್ಲಾ ಹೇಳಿದ್ದಾರೆ.
ಈ ಹಿಂದೆ ಇದೇ 5ಜಿ ತಂತ್ರಜ್ಞಾನ ಜೀವ ಸಂಕುಲಕ್ಕೆ ಅಪಾಯ ತಂದೊಡ್ಡುತ್ತದೆ ಎಂದು ಆರೋಪಿಸಿ ದೆಹಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ನಟಿ, 5ಜಿ ತಂತ್ರಜ್ಞಾನ ಜಾರಿಗೆ ತಡೆ ನೀಡಬೇಕು ಎಂದು ಕೋರಿದ್ದರು.
ಆದರೆ ಜೂಹಿ ಚಾವ್ಲಾ ಈ ಅರ್ಜಿಯನ್ನು ಪ್ರಚಾರಕ್ಕಾಗಿ ಎಂದು ಪರಿಗಣಿಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ನಟಿಗೆ 20 ಲಕ್ಷ ರೂ ದಂಡ ವಿಧಿಸಿತ್ತು. ಬಳಿಕ ತೀವ್ರ ಮುಜುಗರಕ್ಕೊಳಗಾಗಿದ್ದ ನಟಿ , ಸಾಮಾಜಿಕ ಜಾಲತಾಣಗಳಲ್ಲೂ ನಟಿಯ ವಿರುದ್ಧ ವ್ಯಾಪಕ ಟೀಕೆ ಮತ್ತು ಮೀಮ್ ಗಳು ಹರಿದಾಡಿತ್ತು. ಇದೀಗ ಮತ್ತೆ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ನಟಿ, ನಾನು 5ಜಿ ತಂತ್ರಜ್ಞಾನದ ವಿರೋಧಿಯಲ್ಲ. ಆದರೆ ಇದರಿಂದ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು. ಮತ್ತು ಪ್ರತೀಯೊಬ್ಬರಿಗೂ ಇದು ಸುರಕ್ಷಿತ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.