ನಾನೀಗ ಮಾತನಾಡೋ ಸ್ಥಿತಿಯಲ್ಲಿಲ್ಲ! ಎಸ್‌ ಎಂ ಕೆ ಅಂತಿಮ ದರುಶನ ಪಡೆದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾನೀಗ ಮಾತನಾಡೋ ಸ್ಥಿತಿಯಲ್ಲಿ ಇಲ್ಲ, ಪ್ಲೀಸ್‌ ಎಂದು ಮಾಧ್ಯಮಗಳಿಗೆ ಹೇಳಿ ನಟಿ ರಮ್ಯಾ ಮುಂದೆ ಹೋಗಿದ್ದಾರೆ.

ತಮ್ಮ ರಾಜಕೀಯ ಗುರುಗಳು, ತಂದೆಯಂತೆ ಗೌರವಿಸುತ್ತಿದ್ದ ಎಸ್‌. ಎಂ. ಕೃಷ್ಣ ಅವರನ್ನು ಕಳೆದುಕೊಂಡು ನಟಿ ದು:ಖಿತರಾಗಿದ್ದು, ಅಂತಿಮ ದರುಶನ ಪಡೆಯುವ ವೇಳೆ ಕಣ್ಣೀರಿಟ್ಟಿದ್ದಾರೆ.

ಎಸ್‌.ಎಂ.ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟ ರಮ್ಯಾ ಅವರು ಕಾಂಗ್ರೆಸ್‌ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್‌ನಿಂದಾಗಿ ಹೈಕಮಾಂಡ್‌ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.

Actor Ramya to return to politics soon

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ನ ಪ್ರಭಾವಶಾಲಿ ನಾಯಕರ ಜೊತೆ ನೇರವಾಗಿ ಸಂಪರ್ಕ ಸಾಧಿಸಬಲ್ಲ ರಾಜ್ಯದ ಕೆಲವೇ ಕಾಂಗ್ರೆಸ್ಸಿಗರಲ್ಲಿ ರಮ್ಯಾ ಕೂಡ ಒಬ್ಬರಾಗಿದ್ದರು.

ಕೃಷ್ಣ ಅವರನ್ನು ಅಂಕಲ್‌ ಎಂದೇ ಕರೆಯುತ್ತಿದ್ದ ರಮ್ಯಾ, ಕೃಷ್ಣ ಅವರ ಮಾರ್ಗದರ್ಶನದಲ್ಲೇ ರಾಜಕೀಯ ನಡೆಗಳನ್ನು ಇಟ್ಟವರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ನ ಒಳ ರಾಜಕಾರಣವನ್ನು ಭೇದಿಸಿ ಸಂಸದರಾಗಲು ಈ ಮಾರ್ಗದರ್ಶನವೇ ಅವರಿಗೆ ರಕ್ಷೆಯಾಗಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!