Monday, October 27, 2025

ನನ್ನನ್ನು ಕ್ಷಮಿಸಿ…ಕರೂರು ಮೃತರ ಕುಟುಂಬಸ್ಥರಲ್ಲಿ ಕ್ಷಮೆಯಾಚಿಸಿದ ವಿಜಯ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ಕರೂರು ಭೀಕರ ಕಾಲ್ತುಳಿತ ದುರಂತ ಸಂಭವಿಸಿ 1 ತಿಂಗಳು ಬಳಿಕ ಟಿವಿಕೆ ವಿಜಯ್ ರ‍್ಯಾಲಿಯಲ್ಲಿ ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ, ಕರೂರಿನಲ್ಲಿ ಭೇಟಿಯಾಗದಿರೋದಕ್ಕೆ ಕ್ಷಮೆಯಾಚಿಸಿದ್ದಾರೆ.

ಮೃತಪಟ್ಟವರ ಕುಟುಂಬಸ್ಥರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ರೆಸಾರ್ಟ್‌ನಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಟಿವಿಕೆ ಪಕ್ಷ, ರೆಸಾರ್ಟ್‌ನ ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು. ಟಿವಿಕೆ ನಾಯಕ ಸಂತ್ರಸ್ತ ಕುಟುಂಬಸ್ಥರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಯಂತೆ ಒಟ್ಟು 7.8 ಕೋಟಿ ರೂ. ಪರಿಹಾರ ವಿತರಣೆ ಮಾಡಿದ್ದಾರೆ.

ಇನ್ನೂ ಇದೇ ವೇಳೆ ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯ, ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ, ರಾಜಕೀಯ ಸಮಾವೇಶ, ರೋಡ್‌ಶೋ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ 10 ದಿನಗಳ ಒಳಗೆ ಎಸ್‌ಓಪಿ ರಚಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.ಇದನ್ನೂ ಓದಿ:

error: Content is protected !!