Monday, August 8, 2022

Latest Posts

IMA ಬಹುಕೋಟಿ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ರಾಜ್ಯ ಸರ್ಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಎಂಎ ಸಂಸ್ಥೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದೆ. ರೋಷನ್ ಬೇಗ್​ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ಕಡೆಯಿಂದ ಹೈಕೋರ್ಟ್​ಗೆ ಮಾಹಿತಿ ನೀಡಲಾಗಿದೆ.
ಇನ್ನು ಐಎಂಎಯಿಂದ ಸರ್ಕಾರಿ ಶಾಲೆಗೆ 10 ಕೋಟಿ ದೇಣಿಗೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ತರಾಟೆ ತೆಗೆದುಕೊಂಡಿದೆ. ದೇಣಿಗೆ ನೀಡಿರುವುದರಿಂದ ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿದರು.
ಈ ವೇಳೆ ಶಾಸಕರ ಆಸ್ತಿ ಜಪ್ತಿ ಮಾಡಲು ವಿಳಂಬ ಮಾಡಿದ್ದೀರಿ? ಅರ್ಧ ಡಜನ್ ಆದೇಶ ನೀಡಿದ ನಂತರ ಜಪ್ತಿ ಮಾಡಿದ್ದೀರಾ.. ಈಗ ಸರ್ಕಾರಿ ಶಾಲೆಗೆ ನೀಡಿದ ದೇಣಿಗೆ ಹಿಂತಿರುಗಿಸಿಲ್ಲ ಅಂತೀರಾ.? ಠೇವಣಿದಾರರ ಹಣ ದೇಣಿಗೆ ಪಡೆದಿರುವುದು ಸರಿಯೇ.? ಐಎಂಎ ಬಗ್ಗೆ ಮೃದು ಧೋರಣೆ ತಳೆದಿದ್ದೀರಿ.? ಸರ್ಕಾರ ಸಕ್ಷಮ ಪ್ರಾಧಿಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು ದೇಣಿಗೆ ಹಿಂತಿರುಗಿಸುವ ಬಗ್ಗೆ ನಿಲುವು ತಿಳಿಸಲು ಸೂಚನೆ ನೀಡಿ ವಿಚಾರಣೆಯನ್ನ ಜುಲೈ 19 ಕ್ಕೆ ಮುಂದೂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss