ರಾಜ್ಯದಲ್ಲಿ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ‌ ಮತ್ತೆ ಪ್ರಭಲವಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ. ಈ ಬೆಳವಣಿಗೆ ರಾಜ್ಯದ ಕರಾವಳಿಯಲ್ಲಿ ಹೆಚ್ಚಿನ ಪರಿಣಾಮ ಬೀರದಿದ್ದರೂ, ಮಳೆ ವಾತಾವರಣ ಮುಂದುವರಿಯಲಿದೆ.
ಏ.19ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕೊಡಗು, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಕೂಡಾ ಮಳೆಯ ಸಾಧ್ಯತೆ ಹೆಚ್ಚಾಗಿದೆ.
ಕಾಸರಗೋಡು ಸೇರಿದಂತೆ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಈ ಅವಧಿಯಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!