ಮುಂದಿನ 3-4 ಗಂಟೆಗಳ ಕಾಲ ಕೆಲ ರಾಜ್ಯಗಳಲ್ಲಿ ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ 3-4 ಗಂಟೆಗಳಲ್ಲಿ ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಮುನ್ಸೂಚನೆ ನೀಡಿದೆ. ಉತ್ತರಾಖಂಡದ ಹೆಚ್ಚಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

“ಇತ್ತೀಚಿನ ಉಪಗ್ರಹ ಚಿತ್ರಣವು ಮುಂದಿನ 3-4 ಗಂಟೆಗಳಲ್ಲಿ ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಗುಡುಗು/ಮಿಂಚು/ಗಾಳಿಯೊಂದಿಗೆ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ”ಎಂದು ಟ್ವೀಟ್‌ ಮಾಡಿದೆ.

ಉತ್ತರಾಖಂಡಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ರಾಜ್ಯದ ಹೆಚ್ಚಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಉತ್ತರಕಾಶಿ, ಚಮೋಲಿ ಮತ್ತು ರುದ್ರಪ್ರಯಾಗದಲ್ಲಿ ಮಳೆ ಮತ್ತು ಬಾಗೇಶ್ವರ್, ಅಲ್ಮೋರಾ ಮತ್ತು ಪಿಥೋರಗಢದಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. 70 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಹರಿಯಾಣ, ಈಶಾನ್ಯ ರಾಜಸ್ಥಾನ, ಉತ್ತರ ಪ್ರದೇಶಗಳಿಗೆ ಐಎಂಡಿ ಶನಿವಾರ ಆರೆಂಜ್ ಅಲರ್ಟ್ ನೀಡಿದ್ದು, ಮುಂದಿನ 3-4 ದಿನಗಳವರೆಗೆ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!