ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಮತ್ತು ಲಕ್ಷದ್ವೀಪದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಅರಬ್ಬೀ ಸಮುದ್ರದಿಂದ ದಕ್ಷಿಣ ಭಾರತದ ಕಡೆ ಕಡಿಮೆ ಉಷ್ಣತೆಯಲ್ಲಿ ಪಶ್ಚಿಮ ಗಾಳಿಯು ಬಲವಾಗಿ ಬೀಸಲಿದ್ದು ಇದರ ಪರಿಣಾಮದಿಂದಾಗಿ ಮಳೆಯು ಹೆಚ್ಚಲಿದೆ. ಅದರಲ್ಲೂ ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ದುರ್ಬಲ ಕಟ್ಟಡಗಳಲ್ಲಿ ಹಾಗೂ ನೀರು ನಿಲ್ಲಬಹುದಾದ ತಗ್ಗಿನ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.