ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ವಿಚಾರದ ಕುರಿತು ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರೈತರಿಗೆ ಸಮಸ್ಯೆ ಸೃಷ್ಟಿಸದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಸಿಎಂ ಹಣಕಾಸು ಸಚಿವಾಲಯ, ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದರು.
ವಕ್ಫ್ ವಿಚಾರದಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಅಧಿಸೂಚನೆ ವಿಷಯದಲ್ಲಿ ಕೆಲವು ಅಧಿಕಾರಿಗಳ ಧೋರಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.