ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಇಂದು ವಲಸೆ ಮತ್ತು ವಿದೇಶಿಯರ ಮಸೂದೆ 2025 ಅನ್ನು ಅಂಗೀಕರಿಸಲಾಯಿತು.
ಇದಕ್ಕೂ ಮೊದಲು ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025 ರ ಮೇಲಿನ ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಿದರು.
ಅಲ್ಪಸಂಖ್ಯಾತ ಗುಂಪುಗಳು ಭಾರತದಲ್ಲಿ ಅತ್ಯಂತ ಸುರಕ್ಷಿತವಾಗಿವೆ. ಸರ್ಕಾರವು ಯಾವಾಗಲೂ ನಿರಾಶ್ರಿತರ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದರು. ಪ್ರವಾಸಿಗರಾಗಿ ಅಥವಾ ಶಿಕ್ಷಣ, ಆರೋಗ್ಯ ಮತ್ತು ವ್ಯವಹಾರಕ್ಕಾಗಿ ಭಾರತಕ್ಕೆ ಬರಲು ಬಯಸುವವರನ್ನು ಸ್ವಾಗತಿಸಲು ಸರ್ಕಾರ ಸಿದ್ಧವಾಗಿದೆ. ಆದರೆ ಬೆದರಿಕೆಯನ್ನು ಒಡ್ಡುವವರನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಂದು ಹೇಳಿದರು.
ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನುಂಟುಮಾಡುವವರನ್ನು ದೇಶಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ. ಯಾರಾದರೂ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ನಮ್ಮ ದೇಶಕ್ಕೆ ಬಂದರೆ, ಅವರಿಗೆ ಯಾವಾಗಲೂ ಸ್ವಾಗತವಿದೆ ಎಂದು ಹೇಳಿದ್ದಾರೆ. ಬಳಿಕ ವಲಸೆ ಮತ್ತು ವಿದೇಶಿಯರ ಮಸೂದೆ 2025 ಅನ್ನು ಅಂಗೀಕರಿಸಲಾಯಿತು.