ಹೊಸದಿಗಂತ ಡಿಜಿಟಲ್ ಡೆಸ್ಕ್
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಂದು ಪ್ರತಿಪಕ್ಷಗಳು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದೆ. ಈ ಮೂಲಕ ಈಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಕಾನ್ ಗೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತ ಸಂಕಷ್ಟ ಎದುರಾಗಿದೆ.
ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಏಪ್ರಿಲ್ 4 ರಂದು ಅವಿಶ್ವಾಸ ಗೊತ್ತುವಳಿ ನಡೆಯಲಿದೆ ಎಂದು ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.