ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.
ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದಿದ್ದಾರೆ.