ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೊಸ ಮತ್ತು ಪ್ರಗತಿಪರ ಕೈಗಾರಿಕಾ ನೀತಿಯನ್ನು ಸರಕಾರ ತರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ(ವಿಟಿಪಿಸಿ) ಆಯೋಜಿಸಿದ್ದ ‘ರಾಜ್ಯ ರಫ್ತು ಶ್ರೇಷ್ಠ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ , ಈ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿಯನ್ನು ಉದ್ಯಮ ವಲಯದಿಂದ ಶ್ಲಾಘಿಸಲಾಗಿತ್ತು. ಇದು ಅತ್ಯಂತ ಪ್ರಗತಿಪರ ಕೈಗಾರಿಕಾ ನೀತಿ ಎಂದು ತಿಳಿದುಬಂದಿದೆ. ನಮ್ಮ ಸರ್ಕಾರ ಶೀಘ್ರದಲ್ಲೇ ಕೈಗಾರಿಕೋದ್ಯಮಿಗಳು ಮತ್ತು ರಫ್ತುದಾರರೊಂದಿಗೆ ಚರ್ಚಿಸಿ ಹೊಸ ಮತ್ತು ಪ್ರಗತಿಪರ ಕೈಗಾರಿಕಾ ನೀತಿಯನ್ನು ಹೊರತರಲಿದೆ ಎಂದು ಹೇಳಿದರು.
ತಮ್ಮ ಸರ್ಕಾರ ಕೈಗಾರಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ . ತ್ವರಿತ ಕೈಗಾರಿಕೀಕರಣದಿಂದ ಮಾತ್ರ ಉದ್ಯೋಗ ಸೃಷ್ಟಿ ಸಾಧ್ಯ ಎಂದರು. ಕೈಗಾರಿಕಾ ಅಭಿವೃದ್ಧಿಯು ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. ಆರ್ಥಿಕ ಅಭಿವೃದ್ಧಿಯು ತರುವಾಯ GDP ಮತ್ತು ಉತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ದೇಶದಲ್ಲಿ ಸುಧಾರಿಸುತ್ತದೆ. ಈ ಅಂಶಗಳು ಹೂಡಿಕೆಗಳಿಗೆ ಕಾರಣವಾಗುತ್ತವೆ ಎಂದು ವಿವರಿಸಿದರು.