ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯ ಇಂದಿನಿಂದ ಜಾರಿಯಾಗಲಿದೆ.
ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ಅನ್ನಭಾಗ್ಯ ಯೋಜನೆ ಅನ್ವಯ ತಿಂಗಳು 10 ಕೆಜಿ ಅಕ್ಕಿ ವಿತರಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು.
ಅದರಂತೆಯೇ ಸಿಎಂ ಸಿದ್ದರಾಮಯ್ಯ ಕೇಂದ್ರದ ಜೊತೆ ಮಾತನಾಡಿದ್ದು, ಕೇಂದ್ರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸಿಎಂ ಹೇಳಿದ್ದರು. ತದನಂತರ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುವ ಪ್ರಯತ್ನ ಮಾಡಲಾಯ್ತು ಆದರೆ ಇದ್ಯಾವುದೂ ಸೂಕ್ತವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಐದು ಕೆಜಿ ಅಕ್ಕಿ ಬದಲಿಗೆ ಹಣವನ್ನು ವರ್ಗಾವಣೆ ಮಾಡುವ ನಿರ್ಧಾರಕ್ಕೆ ಸಂಪುಟ ಬಂದಿದ್ದು, ಇಂದಿನಿಂದಲೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
ಪ್ರತೀ ಕೆಜಿ ಅಕ್ಕಿಗೆ 34 ರೂಪಾಯಿಯಂತೆ 170 ರೂಪಾಯಿಗಳನ್ನು ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಕುಟುಂಬದಲ್ಲಿ ಐದು ಜನ ಇದ್ದರೆ 850 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.