ಕೇಂದ್ರ ಸರ್ಕಾರದಿಂದ ಪರೀಕ್ಷಾ ಕಾನೂನು ಜಾರಿ: ಕಾಂಗ್ರೆಸ್ ನಿಂದ ಟೀಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀಟ್​​ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮವನ್ನು ತಡೆಯಲು ಕೇಂದ್ರ ಸರ್ಕಾರವು ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024ಅನ್ನು ಅಧಿಸೂಚನೆ ಹೊರಡಿಸಿದೆ.

ಇತ್ತ ಈ ಕಾನೂನನ್ನು ಕಾಂಗ್ರೆಸ್ ಟೀಕಿಸಿದೆ. ಕೇಂದ್ರ ಸರ್ಕಾರವು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024ಅನ್ನು ಅಧಿಸೂಚಿಸಿರುವುದು ಹಾನಿ ನಿಯಂತ್ರಣದ ಪ್ರಯತ್ನವಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.

ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಕಾನೂನಿನ ಅಗತ್ಯವಿದೆ. ಆದರೆ ಇದು ಪ್ರಶ್ನೆಪತ್ರಿಕೆ ಸೋರಿಕೆಯ ನಂತರದ ಪರಿಸ್ಥಿತಿಯನ್ನು ನಿಭಾಯಿಸುತ್ತದೆ. ಪತ್ರಿಕೆ ಸೋರಿಕೆಯಾಗದಂತೆ ನೋಡಿಕೊಳ್ಳಲು ಕಾನೂನು ಮತ್ತು ಕಾರ್ಯವಿಧಾನಗಳ ಅಗತ್ಯವಿದೆ ಎಂದು ಅವರು ಹೇಳಿದರು.

ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ-2024ಕ್ಕೆ ರಾಷ್ಟ್ರಪತಿಗಳು 2024 ಫೆಬ್ರವರಿ 13ರಂದು ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಕಾಯಿದೆಯು 21 ಜೂನ್ 2024 ರಿಂದ ಜಾರಿಗೆ ಬಂದಿದೆ. ಇಂದು ಬೆಳಗ್ಗೆಯೇ (ಜೂನ್​ 22) ದೇಶಕ್ಕೆ ತಿಳಿಸಲಾಗಿದೆ. ಇದು ಸ್ಪಷ್ಟವಾಗಿ NEET, UGC-NET, CSIR-UGC-NET ಮತ್ತು ಇತರ ಹಗರಣಗಳಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ನೀಟ್​​, ಯುಜಿಸಿ ನೆಟ್​​​ ಪರೀಕ್ಷೆಗಳ ವಿವಾದದ ನಡುವೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024ಅನ್ನು ಕೇಂದ್ರ ಸರ್ಕಾರ ಶುಕ್ರವಾರ(ಜೂನ್​​ 22) ಅಧಿಸೂಚನೆ ಹೊರಡಿಸಿದೆ. ಈ ಕಾಯ್ದೆಯಡಿ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿವರೆಗೆ ದಂಡ ವಿಧಿಸಲು ಅವಕಾಶವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!