ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದಾಗಿದೆ.
ನಾಳೆ ಸಂಜೆ 5 ಗಂಟೆಗೆ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಎಲ್ಲಾ ರೀತಿ ಯ ಸಿದ್ಧತೆಗಳಾಗಿವೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಕೆ ಹೇಗೆ?
ಈಗಾಗಲೇ ಎಲ್ಲ ಸಿಬ್ಬಂದಿಗೆ ತರಬೇತಿಯಾಗಿದ್ದು, ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.
ಏನೆಲ್ಲಾ ಮಾಹಿತಿ ಬೇಕು?
ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್
ಪಾಸ್ಬುಕ್ ಝೆರಾಕ್ಸ್
ಪಡಿತರ ಚೀಟಿ