ಪ್ರವಾಸೋಧ್ಯಮ ಅಭಿವೃದ್ಧಿಗೆ ಹೊಸ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಮಂಡ್ಯ :

ರಾಜ್ಯದಲ್ಲಿ ಪ್ರವಾಸೋಧ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸೋಧ್ಯಮ ಅಭಿವೃದ್ಧಿಗೆ ಹೊಸ ನೀತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಪ್ರವಾಸೋಧ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲೂಕು ಗಗನಚುಕ್ಕಿಯಲ್ಲಿ ಗಗನಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಪ್ರಕೃತಿದತ್ತ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಇತ್ತೀಚಿನ ದಿನಗಳಲ್ಲಿ ಪವಾಸಿ ತಾಣಗಳಿಗೆ ಹೆಚ್ಚಿನ ಜನತೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಆದಾಯವೂ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯತೆಯೂ ಇದೆ. ಇದನ್ನು ಮನಗಂಡು ಪ್ರವಾಸಿ ತಾಣಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!