ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್ಇಪಿ (NEP) ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎನ್ಇಪಿ ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ ಎನ್ಇಪಿ ರದ್ದು ಮಾಡುತ್ತೇವೆ ಎಂದರು.
ಹಿಂದಿನ ಬಿಜೆಪಿ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್ಇಪಿ ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ. ಎನ್ಇಪಿ ಬದಲಾಗಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡೋ ಯೋಜನೆ ಇದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಪ್ರಾರಂಭ ಮಾಡುತ್ತೇವೆ. ಶಿಕ್ಷಣ ನೀತಿ ರೂಪಿಸಲು ತಜ್ಞರ ಸಮಿತಿ ರಚನೆ ಮಾಡಿತ್ತೇವೆ ಎಂದರು.