ಮುಂದಿನ ವರ್ಷದಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿ: ಸಚಿವ ಎಂ.ಸಿ ಸುಧಾಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು (State Education Policy) ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌ (MC Sudhakar) ಹೇಳಿದ್ದಾರೆ.

ಅರಸೀಕೆರೆ ನಗರದಲ್ಲಿ ನೂತನ ಎಂಜಿನಿಯರಿಂಗ್‌ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 2021 ರಲ್ಲಿ ಎನ್‌ಇಪಿ ಜಾರಿಗೊಳಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ, ಜಾರಿ ಮಾಡಿರುವುದರಿಂದ ಅದರಲ್ಲಿ ಸಾಕಷ್ಟು ನ್ಯೂನತೆ ಕಂಡುಬಂದಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಹಲವು ಕಡೆಗಳಲ್ಲಿ NEP ಜಾರಿಯಾದ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಅನೇಕ ಕಡೆಗಳಲ್ಲಿ ಮೂಲ ಸೌಕರ್ಯವಿಲ್ಲದ ಕಾರಣ ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಪೂರಕ ವಾತಾವರಣವಿಲ್ಲ. ಎನ್‌ಇಪಿ ವಿಷಯಗಳೇ ಬೇರೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿಷಯಗಳೇ ಬೇರೆ ಇರುವುದರಿಂದಲೇ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಮಕ್ಕಳಿಗೆ ಅನೇಕ ರೀತಿಯ ಸಮಸ್ಯೆಯುಂಟಾಗಿದೆ. ಆದ್ದರಿಂದ ಎಲ್ಲ ವರ್ಗ, ಜಾತಿಗಳನ್ನು ಒಳಗೊಂಡ ಶಿಕ್ಷಣ ನೀತಿಯನ್ನ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!