ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿ: ಸದ್ಯಕ್ಕಿಲ್ಲ ಲಾಕ್ ಡೌನ್, ಪರಿಸ್ಥಿತಿ ಮೀರಿದರೆ ಅನಿವಾರ್ಯ ಎಂದ ಅರಗ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಸರಕಾರ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೊಳಿಸಿದ್ದು, ನಿಯಮ ಮೀರಿ ನಡೆದರೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಸತಿ ಶಾಲೆಗಳಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಆ ಶಾಲೆಗಳನ್ನು ಬಂದ್ ಮಾಡುವಂತ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು.ಅದೇ ರೀತಿ ವೈಕುಂಠ ಏಕಾದಶಿ, ಮಕರ ಸಂಕ್ರಾಂತಿಗೆ ಹಾಲಿ ಇರುವಂತ ಕಠಿಣ ಮಾರ್ಗಸೂಚಿ ಕ್ರಮಗಳನ್ನೇ ಮುಂದುವರೆಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಇಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಕೈಗೊಳ್ಳಲಾಗಿದ್ಧ ಮಾಹಿತಿಗಳನ್ನು ವಿವರಿಸಿದ ಅವರು, ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ಚರ್ಚಿಸಿಲ್ಲ. ಕೊರೋನಾ ಹೆಚ್ಚಳವಾದರೆ ನಿರ್ಧಾರ ಕೈಗೊಳ್ಳೋಣ. ಇನ್ನು ಮಾಸ್ಕ್ ಹಾಕದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಕೊರೋನಾ ಟೆಸ್ಟ್ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಬೆಂಗಳೂರಿನಲ್ಲಿ ಪ್ರತಿದಿನ 1.50 ಲಕ್ಷ ಟೆಸ್ಟ್ ಸಂಖ್ಯೆನ್ನು ಮಾಡಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ.
ಹೋಂ ಐಸೋಲೇಷನ್ ನಲ್ಲಿ ಯಾರಿದ್ದಾರೆ. ಅವರ ಬಗ್ಗೆ ಹೆಚ್ಚು ಗಮನ ಕೊಡಬೇಕು ಎಂಬುದಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು ಶೇ.90ರಷ್ಟು ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ತ್ವರಿತಗೊಳಿಸೋದರ ಬಗ್ಗೆ ನಿರ್ಧರಿಸಲಾಗಿದೆ..ಅದೇ ರೀತಿ ಶಾಲೆ-ವಸತಿ ಶಾಲೆಗಳಲ್ಲಿ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿದೆ. ಆ ಶಾಲೆ, ವಸತಿ ಶಾಲೆಗಳನ್ನು ಬಂದ್ ಮಾಡೋ ಸಂಬಂಧ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳೋದಕ್ಕೆ ಸೂಚಿಸಲಾಗಿದೆ.

ಸಂಕ್ರಾಂತಿ, ವೈಕುಂಠ ಏಕಾದಶಿ ಬರ್ತಾ ಇದೆ. ಈ ಸಂದರ್ಭದಲ್ಲಿ ಈಗಾಗಲೇ ಯಾವ ಕೊರೋನಾ ಮಾರ್ಗಸೂಚಿ ಕ್ರಮಗಳಿವೆ ಅವುಗಳನ್ನು ಮುಂದುವರೆಸಿಕೊಂಡು ಹೋಗುವಂತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನು ಮಕ್ಕಳಲ್ಲಿ ಈಗ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳಿಗೆ ಚಿಕಿತ್ಸೆ ನೀಡೋದಕ್ಕೆ ಔಷಧಿಯನ್ನು ಖರೀದಿಸಿ, ಸಂಗ್ರಹಿಸಿಡೋದಕ್ಕೆ ಸೂಚಿಸಲಾಗಿದೆ. ಮಕ್ಕಳ ವಾರ್ಡ್ ಬೆಡ್ ಕಾಯ್ದಿರಿಸುವಿಕೆಗೆ ಸೂಚಿಸಲಾಗಿದೆ.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಯಾವುದೇ ಕಾರಣಕ್ಕೂ ಪ್ರತಿಭಟನೆ, ಜನ ಸೇರುವಂತ ಕಾರ್ಯಕ್ರಮಗಳನ್ನು ಪೊಲೀಸರು ಮೊದಲೇ ಮಾಹಿತಿ ಸಂಗ್ರಹಿಸಿ, ಅದಕ್ಕೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳೋದಕ್ಕೆ ಸೂಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಾರ್ಕೆಟ್ ಗಳಿದ್ದಾವೆ ಅವುಗಳನ್ನು ವಿಕೇಂದ್ರೀಕರಣ ಮಾಡುವ ಕ್ರಮವನ್ನು ಈ ಹಿಂದೆ ಕೈಗೊಳ್ಳಲಾಗಿತ್ತು. ಅದೇ ರೀತಿಯಲ್ಲಿ ಕ್ರಮ ಕೈಗೊಳ್ಳುವ ತೀರ್ಮಾನವನ್ನು ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಮುಖ್ಯವಾಗಿ ಮಾಸ್ಕ್ ಅನ್ನು ಜನರು ಕಡ್ಡಾಯವಾಗಿ ಬಳಕೆ ಮಾಡಬೇಕು. ಮಾಸ್ಕ್ ಧರಿಸದೇ ಇರೋರ ವಿರುದ್ಧ ಪೊಲೀಸರು ಹೆಚ್ಚಿನ ಕ್ರಮ ಕೈಗೊಳ್ಳಲು ತಿಳಿಸಲಾಗುತ್ತದೆ.
ಜನವರಿ 14ರಂದು ಪ್ರಧಾನಿ ನರೇಂದ್ರ ಮೋದಿಯವರು ಸಭೆ ನಡೆಸಲಿದ್ದಾರೆ. ಆ ಸಭೆಯ ಬಳಿಕ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಬಗ್ಗೆ ಮತ್ತೊಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!