ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿದ್ಯಾರ್ಥಿಗಳಿಗೆ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ.
ಐಐಟಿಯಲ್ಲಿ 6,500 ಸೀಟುಗಳನ್ನು ಹೆಚ್ಚಳ ಮಾಡಲಾಗುವುದು. 3 ಎಐ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರೊಂದಿಗೆ ಐದು ವರ್ಷಗಳಲ್ಲಿ ವೈದ್ಯಕೀಯದಲ್ಲಿ 7,500 ಸೀಟುಗಳನ್ನು ಹೆಚ್ಚಿಸಲಾಗುವುದು. ಕೃತಕ ಬುದ್ಧಿಮತ್ತೆ ಶಿಕ್ಷಣಕ್ಕೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ.
ಯುವ ಮನಸ್ಸುಗಳಲ್ಲಿ ಕುತೂಹಲ, ನಾವೀನ್ಯತೆ ಹಾಗೂ ವೈಜ್ಞಾನಿಕ ಮನೋಭಾವ ಪ್ರೇರೇಪಿಸಲು ಮುಂದಿನ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು.
ಐಐಟಿಯ ಸಾಮರ್ಥ್ಯ ಹೆಚ್ಚಳಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು. ಐದು ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಸೃಷ್ಟಿಸಲಾಗುವುದು. ಇದರೊಂದಿಗೆ ಐಐಟಿ ಪಾಟ್ನಾ ವಿಸ್ತರಣೆ ಮಾಡಲಾಗುವುದು.