BIG NEWS | ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮಹತ್ವದ ಸಭೆ: ಕೆಲವೇ ಕ್ಷಣಗಳಲ್ಲಿ ಮೊದಲ ಪಟ್ಟಿ ರಿಲೀಸ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯ ರಚನೆ ಅಂತಿಮ ಹಂತ ತಲುಪಿದೆ. ಇದರ ಭಾಗವಾಗಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ನೇತೃತ್ವದಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ.

ಈ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( BJP State President Nalin Kumar Kateel ), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಸೇರಿದಂತೆ ಹಲವು ರಾಜ್ಯ ನಾಯಕರು ಪಾಲ್ಗೊಂಡಿದ್ದಾರೆ.

ಈ ಸಭೆಯ ಬಳಿಕ ಅಂತಿಮವಾಗಿ ಬಿಜೆಪಿಯ ಹೈಕಮಾಂಡ್ ಸೂಚನೆಯಂತೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಎಷ್ಟು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂಬುದನ್ನು ಪಟ್ಟಿ ಬಿಡುಗಡೆಯ ನಂತ್ರವೇ ತಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!