ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣದ ವಿಚಾರಣೆಯನ್ನು ಇಂದು ಹೈಕೋರ್ಟ್ ಮತ್ತೆ ಕೈಗೆತ್ತಿಕೊಳ್ತಿದೆ. ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ರಾಜ್ಯ ರಾಜಕೀಯದ ಮುಂದಿನ ಆಗು ಹೋಗುಗಳು ನಿರ್ಧಾರವಾಗಲಿವೆ.
ಹೈಕೋರ್ಟ್ 10 ದಿನಗಳ ಕಾಲ ರಿಲೀಫ್ಗೆ ಜಾರಿದ್ದ ಸಿದ್ದು ರಿಟ್ ಅರ್ಜಿ, ಇವತ್ತು ಮತ್ತೆ ವಿಚಾರಣೆಗೆ ಬರಲಿದೆ. ಈ ಅರ್ಜಿ ಮೇಲೆ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಅವಲಂಭಿಸಿವೆ. ಇವತ್ತು ಮಧ್ನಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಈ ಹಿಂದೆ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ, ರಾಜ್ಯಪಾಲರ ಕಚೇರಿಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಇವತ್ತೂ ಕೂಡ ತಮ್ಮ ವಾದ ಪ್ರತಿವಾದವನ್ನು ಮುಂದುವರೆಯಲಿದೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ಗೂ ಇವತ್ತು ಅತಂತ್ಯ ಮಹತ್ವದ ದಿನವಾಗಿದೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತೀರ್ಪು ಕೂಡ ಇವತ್ತು ಪ್ರಕಟವಾಗಲಿದೆ. ಸಿಬಿಐ ಮತ್ತು ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ಇವತ್ತಿಗೆ ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಇದು ತೀವ್ರ ಕುತೂಹಲ ಕೆರಳಿಸಿದೆ.