ರೇವಣ್ಣ ಕುಟುಂಬಕ್ಕಿಂದು ಮಹತ್ವದ ದಿನ: ಬಂಧನವಾ? ಜಾಮೀನಾ? ಏನಾಗಲಿದೆ ಕುಟುಂಬದ ಭವಿಷ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ.

ಮೇ 29 ರಂದು, ಪ್ರಜ್ವಲ್ ಅವರು ತಮ್ಮ ವಕೀಲ ಅರುಣ್ ಮೂಲಕ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಎಫ್‌ಐಆರ್ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಈ ಅರ್ಜಿಯ ವಿಚಾರಣೆಯನ್ನು ಮೇ 31ರಂದು ನಿಗದಿಪಡಿಸಲಾಗಿದೆ.

ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಅವರ ಬಿಡುಗಡೆ ಅರ್ಜಿಯ ತೀರ್ಪು ಕೂಡ ಶುಕ್ರವಾರದಂದು ನಿರೀಕ್ಷಿಸಲಾಗಿದೆ. ಹೀಗಾಗಿ ಶುಕ್ರವಾರ ಎಚ್.ಡಿ.ರೇವಣ್ಣ ಕುಟುಂಬಕ್ಕೆ ಮಹತ್ವದ ದಿನವಾಗಿದೆ.

ಎಸ್‌ಐಟಿ ಕಚೇರಿಯಲ್ಲಿ ತಂಗಿದ್ದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪರಿಶೀಲಿಸಿದ ನಂತರ ಅವರನ್ನು ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಾರೆ. ಬೌರಿಂಗ್‌ ಆಸ್ಪತ್ರೆ ಬಳಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವೈದ್ಯಕೀಯ ಪರೀಕ್ಷೆ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!