ಜಮ್ಮು ಮತ್ತು ಕಾಶ್ಮೀರ ಸರ್ಕಾರದಿಂದ ಮಹತ್ವದ ನಿರ್ಧಾರ: 48 ಪ್ರವಾಸಿ ತಾಣಗಳಿಗೆ ಬೀಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂದೂಕಿನ ಸದ್ದಿಗೆ ಈಗಲೂ ನಡುಗುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳಿಗೆ ಬೀಗ  ಹಾಕುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಈ ಪ್ರವಾಸಿ ತಾಣಗಳು ದುರ್ಬಲ ಪ್ರದೇಶಗಳಲ್ಲಿ ಬರುತ್ತವೆ ಅಥವಾ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ತೀವ್ರಗೊಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಾ ಮೈದಾನ, ದೂದ್​ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್​ಹಾರ್​ ಮುಚ್ಚಲು ನಿರ್ಧರಿಸಲಾಗಿದೆ.

ಇನ್ನು ತೆರೆದಿರುವ ತಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತದೆ. ಒಂದು ವಾರದ ಹಿಂದಷ್ಟೇ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿದ್ದರು. 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದರು.ಈ ದಾಳಿಯ ಹೊಣೆಯನ್ನು ಲಷ್ಕರ್ -ಎ- ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್ ಹೊತ್ತುಕೊಂಡಿತ್ತು. ಆಕ್ರೋಶ ವ್ಯಕ್ತವಾದ ಬಳಿಕ ನಮ್ಮ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವಿಲ್ಲ ಎಂದು ನುಣುಚಿಕೊಳ್ಳಲು ಪ್ರಯತ್ನಿಸಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!