ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ.. ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಮೀಸಲಾತಿ 15% ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುತ್ತಿಗೆ ಮೀಸಲಾತಿ ಬಳಿಕ ಈಗ ವಸತಿ ಯೋಜನೆಯಲ್ಲಿ ಮುಸ್ಲಿಮ್‌ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನೀಡಲಾಗಿದ್ದು ಈಗ 15% ಮೀಸಲಾತಿ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ.

ಇನ್ನು ಮುಸ್ಲಿಮ್‌ ವಸತಿ ಮೀಸಲಾತಿ ಹೆಚ್ಚಳವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದಾರೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ, ಇದು ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯವಾಗಲಿದೆ. ಮುಸ್ಲಿಮ್‌, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ ಅಂತಾ ಸ್ಪಷ್ಟಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!