ರಾಜ್ಯ ಸರ್ಕಾರ ಮಹತ್ವದ ನಿರ್ಧಾರ: ಒಟ್ಟು 44 ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಸೂಚಿಸಿದ್ದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದೆ. ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರೊಂದಿಗೆ ಬಹುನಿರೀಕ್ಷಿತ ನಿಗಮ ಮಂಡಳಿ ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಕ ಮಾಡಿದೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ..

ಯಾರಿಗೆ ಯಾವ ಅಧ್ಯಕ್ಷ ಸ್ಥಾನ?

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಸಾಧು ಕೋಕಿಲ- ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!