BIG NEWS | ಯೋಗಿ ಸರ್ಕಾರದ ದಿಟ್ಟ ನಿರ್ಧಾರ: ಉತ್ತರ ಪ್ರದೇಶದಲ್ಲಿ ‘ಹಲಾಲ್‌’ ಉತ್ಪನ್ನಗಳ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್

ಉತ್ತರ ಪ್ರದೇಶ ಸರ್ಕಾರವು (Uttar Pradesh Government) ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು (Halal Certified Products) ನಿಷೇಧಿಸಿದೆ.

‘ಉತ್ತರ ಪ್ರದೇಶದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವು ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ’ ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳು, ಔಷಧಗಳು ಸೇರಿ ಯಾವುದೇ ವಸ್ತುಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಿದೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಔಷಧಗಳ ಮೇಲೆ ನಕಲಿ ಪ್ರಮಾಣಪತ್ರ ಅಂಟಿಸಿ ಹಲಾಲ್‌ ಪ್ರಮಾಣೀಕೃತ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ಇದೊಂದು ದೊಡ್ಡ ಅಕ್ರಮ ಎಂಬ ಆರೋಪಗಳು ಕೇಳಿಬಂದಿದ್ದವು. ಇದೇ ಕಾರಣಕ್ಕಾಗಿ ಯೋಗಿ ಆದಿತ್ಯನಾಥ್‌ ಸರ್ಕಾರವು ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿದೆ . ಅಲ್ಲದೆ, ಕೆಲ ಕಂಪನಿಗಳ ವಿರುದ್ಧ ನಕಲಿ ಪ್ರಮಾಣಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ಕೂಡ ದಾಖಲಾಗಿದ್ದವು.

https://twitter.com/ANINewsUP/status/1725881765871726629?ref_src=twsrc%5Etfw%7Ctwcamp%5Etweetembed%7Ctwterm%5E1725881765871726629%7Ctwgr%5E732c9734a098b270f08f584e7a9d79e5923ecf23%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fforyou%3Fmode%3Dpwaaction%3Dclicklaunch%3Dtrue

ಏನಿದು ನಕಲಿ ಪ್ರಮಾಣಪತ್ರ ಪ್ರಕರಣ?

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು, ನಕಲಿ ಹಲಾಲ್‌ ಪ್ರಮಾಣಪತ್ರಗಳನ್ನು ಉತ್ಪನ್ನಗಳಿಗೆ ಅಂಟಿಸಿ ಮಾರಾಟ ಮಾಡುವ ಜಾಲ ಬಯಲಾಗಿದೆ. ಉಲಾಮಾ ಐ ಹಿಂದ್‌ ಸೇರಿ ಹಲವು ಕಂಪನಿಗಳು, ಸಂಸ್ಥೆಗಳ ವಿರುದ್ಧವೂ ನಕಲ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!