May 26, 2026
Tuesday, May 26, 2026
spot_img

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ಮಹತ್ವದ ಮಾತುಕತೆ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಹಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ.

ಅಮೆರಿಕ ನಿಯೋಗದಿಂದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ , ಡೊನಾಲ್ಡ್ ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಮತ್ತು ಮಧ್ಯಪ್ರಾಚ್ಯ ರಾಯಭಾರಿ ಸ್ಟೀವ್ ವಿಟ್ಕಾಫ್ ಆಗಮಿಸಿದ್ದು, ಇರಾನ್ ನಿಯೋಗದಿಂದ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಕಿರ್ ಘಾಲಿಬಾಫ್ , ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಕೂಡ ಆಗಮಿಸಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಇಲಾಖೆಯ ಮೂಲಗಳ ಪ್ರಕಾರ, ಉಭಯ ದೇಶಗಳ ನಾಯಕರು ಪಾಕಿಸ್ತಾನದ ಅಧಿಕಾರಿಗಳ ಮೂಲಕ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಇದರ ಬಳಿಕ ಅಮೆರಿಕ ಮತ್ತು ಇರಾನ್ ನಾಯಕರು ನೇರವಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈ ಸಭೆ ಆರಂಭಕ್ಕೂ ಮುನ್ನ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಎರಡೂ ದೇಶಗಳ ನಿಯೋಗದೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !