ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ ಏಳು ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಕರ್ನಾಟಕದ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ.
ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಯಲಿದ್ದು, ಇಲ್ಲಿಯೇ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಲಾಗುತ್ತದೆ. ಸಿದ್ದರಾಮಯಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ. ಇಂದು ಪ್ರಮಾಣವಚನಕ್ಕೆ ಸಿದ್ಧತೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಮೇ.20ರಂದು ನೂತನ ಸಿಎಂ ಪ್ರಮಾಣವಚನಕ್ಕೆ ಸಿದ್ಧತೆ ನಡೆದಿದೆ. ಎಲ್ಲ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ.