ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆಯ ಬಳಿಕ ಖಾಸಗಿ ಆಟೋ, ಬಸ್, ಟ್ಯಾಕ್ಸಿ ಚಾಲಕರು, ಮಾಲಿಕರಿಗೆ ಸಂಕಷ್ಟ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಸಮಸ್ಯೆ ಸರಿಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆ.21ರಂದು ವಿವಿಧ ಸಂಘಟನೆಗಳ ಸಭೆ ನಡೆಸಲಿದ್ದಾರೆ.
ಈ ಸಂಬಂಧ ಮಾಹಿತಿಯನ್ನು ಸಿಎಂ ಸಿದ್ಧರಾಮಯ್ಯ ಕಚೇರಿಗಳಿಂದ ನೀಡಲಾಗಿದ್ದು, ಆ. 21ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಖಾಸಗಿ ಸಾರಿಗೆ ಒಕ್ಕೂಟಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ, 25ಕ್ಕೂ ಹೆಚ್ಚು ಖಾಸಗಿ ಸಾರಿಗೆ ಕ್ಷೇತ್ರಗಳ ಸಂಘಟನೆಗಳ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಹೀಗೆ ಆಹ್ವಾನ ನೀಡಿದಂತವರಿಗೆಲ್ಲ, ಸಭೆಗೆ ಆಗಮಿಸೋ ಸಲುವಾಗಿ ಸಿಎಂ ಕಚೇರಿಯಿಂದ ಭದ್ರತಾ ಸಿಬ್ಬಂದಿಗೆ ಗುರುತಿನ ಚೀಟಿ ನೀಡಿ, ಸಭೆಗೆ ಹಾಜರಾಗಲು ಸೂಚಿಸಲಾಗಿದೆ.