ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ಇದೇ 18ರಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆ ನಡೆಯಲಿದೆ.
ಅಹಮದಾಬಾದ್‌ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನಕ್ಕೆ ಮೂರು ವಾರಗಳ ಮೊದಲು ಈ ಸಭೆ ನಡೆಯಲಿದೆ.
ಉಸ್ತುವಾರಿಗಳ ಸಭೆ ದಿನವಿಡೀ ನಡೆಯಲಿದ್ದು,ಅಲ್ಲಿ ರಾಜ್ಯಗಳ ಹಿರಿಯ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ. ಹಾಗೂ ಕ್ಷೇತ್ರ ಮರುವಿಂಗಡಣೆ, ಚುನಾವಣಾ ಸುಧಾರಣೆಗಳು, ತ್ರಿಭಾಷಾ ವಿವಾದ ಮತ್ತು ಅಮೆರಿಕ ಸುಂಕಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಪಕ್ಷದ ನಿಲುವಿನ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.