ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ನ್ನು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಈ ಅಧಿಕೃತ ನೇಮಕಾತಿಯ ಜ್ಞಾಪನ ಪತ್ರವನ್ನು ಬಿಡುಗಡೆ ಮಾಡಿದೆ.
ರಾಜಕೀಯ ವ್ಯವಹಾರಗಳ ನಿರ್ವಹಣೆಯ ಜವಾಬ್ದಾರಿ
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆದೇಶದ ಅನ್ವಯ, ನೂತನ ಪ್ರಧಾನ ಸಲಹೆಗಾರರಾದ ಜಿ.ಸಿ. ಚಂದ್ರಶೇಖರ್‌ಗೆ ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳಲ್ಲಿ ಅಗತ್ಯ ಸಲಹೆ ಹಾಗೂ ಸಹಾಯ ಮಾಡುವ ಜವಾಬ್ದಾರಿಯನ್ನು ನೀಡಲಾಗಿದೆ.
ಇದನ್ನೂ ಓದಿ:
ಜಿ.ಸಿ. ಚಂದ್ರಶೇಖರ್ ಹಿನ್ನೆಲೆ:
ಜಿ.ಸಿ. ಚಂದ್ರಶೇಖರ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಕೊಂಡಿಯಾಗಿ ಕೆಲಸ ಮಾಡಲು ಹಾಗೂ ರಾಜಕೀಯ ಗೊಂದಲಗಳನ್ನು ನಿವಾರಿಸಲು ಇವರ ಆಡಳಿತಾತ್ಮಕ ಅನುಭವ ಮುಖ್ಯಮಂತ್ರಿಯವರಿಗೆ ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.



