Monday, October 2, 2023

Latest Posts

ನಾಳೆ ಮಧ್ಯಾಹ್ನ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ಐದು ಗ್ಯಾರಂಟಿ ಜಾರಿ ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನರು ಎದುರು ನೋಡುತ್ತಿರುವಂತ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಜಾರಿಗೆ ಕಾಲ ಕೂಡಿ ಬಂದಿದೆ. ನಾಳೆ ಮಧ್ಯಾಹ್ನ 12ಕ್ಕೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಆ ಬಳಿಕ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯದ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಎಂದು ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದರು. ಆ ಬಗ್ಗೆ ಅಧಿಕೃತ ಆದೇಶ ಜಾರಿಯಾಗುವುದು ಬಾಕಿ ಇದೆ.

ಈ ಬೆನ್ನಲ್ಲೇ ಮೇ 31ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!